ಅಕ್ರಮ ಮದ್ಯದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳೆದುರು ಸ್ಥಳೀಯರು ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ನಡೆದಿದೆ.
ಈ ಘಟನೆಯು ನೆರೆದಿದ್ದ ಜನರ ನಡುವೆ ಕಾಲ್ತುಳಿತದಂತಹ ಪರಿಸ್ಥಿತಿಯನ್ನು ಉಂಟುಮಾಡಿತು. ವರದಿಗಳ ಪ್ರಕಾರ, ಅಬಕಾರಿ ಇಲಾಖೆಯ ವಾಹನವು ಪಿಪ್ರಾ ಸಂಸಾ ಪಿಡಬ್ಲ್ಯೂಡಿ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ, ಮದ್ಯ ಸೇವಿಸಿದ ಶಂಕಿತ ವ್ಯಕ್ತಿಗಳನ್ನು ತನಿಖೆ ಮಾಡಲು ಅಧಿಕಾರಿಗಳು ಕಾರಿನಿಂದ ಇಳಿದಿದ್ದಾರೆ.
ಈ ವೇಳೆ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಗಿ, ಅದು ವಿಕೋಪಕ್ಕೆ ಹೋಯಿತು. ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಿಥಿಲೇಶ್ ಚೌಧರಿ ಅವರ ನಿವಾಸದ ಮೇಲೆ ಗೌಪ್ಯ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ, ಸ್ಥಳೀಯರು ಪೊಲೀಸರ ಮಧ್ಯಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಮಾತಿನ ಚಕಮಕಿ ನಡೆಯಿತು. ಗ್ರಾಮಸ್ಥರು ಪೊಲೀಸರತ್ತ ಇಟ್ಟಿಗೆ ಮತ್ತು ಕಲ್ಲುಗಳನ್ನು ಎಸೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಗ್ರಾಮಸ್ಥರ ಕಲ್ಲುತೂರಾಟದಿಂದ ಮೂವರು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ಕೂಡಲೇ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಸಾರ್ವಜನಿಕ ಸೇವಾ ಕೇಂದ್ರಕ್ಕೆ ದಾಖಲಿಸಲಾಯಿತು. ಪೊಲೀಸರು ಕೇವಲ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
https://twitter.com/Ghanshyamdev3/status/1660501999669088257?ref_src=twsrc%5Etfw%7Ctwcamp%5Etweetembed%7Ctwterm%5E1660501999669088257%7Ctwgr%5E1dbb90b9bfa6e0e133853519ba9ff46aafa53f1e%7Ctwcon%5Es1_&ref_url=https%3A%2F%2Fwww.freepressjournal.in%2Findia%2Fwatch-excise-officials-fire-shots-in-air-in-bihars-begusarai-amid-clash-with-locals-over-liquor-raid