HomeLatest Newsಒಸಿ, ಸಿಸಿ ರಹಿತ ಮನೆಗೆ ವಿದ್ಯುತ್, ನೀರು ಸಂಪರ್ಕಕ್ಕೆ ವಿನಾಯಿತಿ ನೀಡಿ: ಡಾ.ಸಿ.ಎನ್. ಅಶ್ವತ್ಥ್ ನಾರಾಯಣ...

ಒಸಿ, ಸಿಸಿ ರಹಿತ ಮನೆಗೆ ವಿದ್ಯುತ್, ನೀರು ಸಂಪರ್ಕಕ್ಕೆ ವಿನಾಯಿತಿ ನೀಡಿ: ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಆಗ್ರಹ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಿಸಿ ಮತ್ತು ಒಸಿ ಪಡೆಯದೇ ನಿರ್ಮಿಸಿದ ಮನೆಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸಲು ಒಮ್ಮೆಗೆ ವಿನಾಯಿತಿ ನೀಡುವಂತೆ ಶಾಸಕ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಈ ವಿಚಾರ ಪ್ರಸ್ತಾಪಿಸಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ನಗರದಲ್ಲಿ ನಿರ್ಮಿಸಿದ ಮನೆಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡದಿರಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ. ಇದರಿಂದ ಕಷ್ಟಪಟ್ಟು ಮನೆ ಕಟ್ಟಿದವರಿಗೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ನಿರ್ಮಿಸಿದ ಮನೆಗಳಿಗೆ ಸಿಸಿ, ಒಸಿ ಕೋರಿ ಸುಮಾರು 8 ಲಕ್ಷ ಜನ ಅರ್ಜಿ ಹಾಕಿದ್ದಾರೆ. ಈ ಮನೆ ನಿರ್ಮಿಸಿದವರು ಸ್ಥಿತಿವಂತರಲ್ಲ, ಈ ಮನೆಗಳಿಗೆ ಈಗ ನೀರು ವಿದ್ಯುತ್ ಸಂಪರ್ಕ ನೀಡದಿದ್ದರೆ ಅವರು ಏನು ಮಾಡಬೇಕು? ಕೆಡವಲು ಸಾಧ್ಯವೇ? ಕಂದಾಯ ನಿವೇಶನಗಳ ನೋಂದಣಿಗೆ ನಿರ್ದಿಷ್ಟ ದಿನಾಂಕದೊಂದಿಗೆ ಒಮ್ಮೆ ವಿನಾಯಿತಿ ನೀಡಲಾಗಿದೆ. ಇದೇ ಮಾದರಿಯಲ್ಲಿ ಸಿಸಿ, ಒಸಿ ಪಡೆಯದೆ ನಿರ್ಮಿಸಿದ ಮನೆಗಳಿಗೆ ದಂಡರಹಿತವಾಗಿ ಒಂದು ಬಾರಿಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular