HomeLatest NewsBIG NEWS : ರಾಜ್ಯದ 'SSLC' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3...

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ನ್ನು ದಿನಾಂಕ:21.03.2025 ರಿಂದ 04.04.2025ರವರೆಗೆ ನಡೆಸಲಾಗಿದ್ದು, ದಿನಾಂಕ:02.05.2025ರಂದು. ಫಲಿತಾಂಶವನ್ನು ಪ್ರಕಟಿಸಲಾಗಿರುತ್ತದೆ. 20250 ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಕುರಿತು ದಿನಾಂಕ:02.05.2025ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಲಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಈಗಾಗಲೇ ಶುಲ್ಕವಿನಾಯಿತಿ ಇದ್ದು, ಸದರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 2025ರ ಎಸ್ಎಸ್ಎಲ್ಸಿ ಪರೀಕ್ಷೆ – 1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಂದ ಸ್ವೀಕೃತವಾಗುವ ಪರೀಕ್ಷಾ ಶುಲ್ಕದ ಅಂಕಿಅಂಶ ಕೆಳಕಂಡಂತಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿಗೆ ಮಾತ್ರ ಸೀಮಿತಗೊಳಿಸಿ 2025 ರ ಎಸ್ಎಸ್ಎಲ್ಸಿ ಪರೀಕ್ಷೆ – 1 ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು 3 ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲು ಸರ್ಕಾರದ ಸಹಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದುವರೆದು, ಸದರಿ ಪರೀಕ್ಷಾ ಶುಲ್ಕದ ವಿನಾಯಿತಿಯಿಂದ ಉಂಟಾಗುವ ಆರ್ಥಿಕ , KARNATAKA SCHOOL EXAMINATION AND ASSESSMENT BOARD ಆಂತರಿಕ ಸಂಪನ್ಮೂಲದಿಂದ ಭರಿಸುವಂತೆ ಸಹ ತಿಳಿಸಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ:ಆಇ 455 ವೆಚ್ಚ-8/2025, ದಿನಾಂಕ:05.06.2025 ರಲ್ಲಿ ನೀಡಿದ ಸಹಮತಿ ಮೇರೆಗೆ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular