HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ...

BIG NEWS : ‘ರಾಜ್ಯ ಸರ್ಕಾರಿ’ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025ರನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಿರುವ ಅಂಶವನ್ನು ಪ್ರತ್ಯೇಕ ವರ್ಗಾವಣೆ ನಿಯಮಗಳನ್ನು ಹೊಂದಿರುವ ಇಲಾಖೆಗಳಿಗೂ ಅನ್ವಯಿಸುವಂತೆ ಕೋರಿರುತ್ತಾರೆ.

ಪರಿಶೀಲಿಸಲಾಗಿ, 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು, ವರ್ಗಾವಣಾ ಮಾರ್ಗಸೂಚಿಗಳನ್ನೊಳಗೊಂಡ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025 ರನ್ನಯ ನಿಯಂತ್ರಿಸಲಾಗುತ್ತಿದೆ. ಸದರಿ ಆದೇಶದ ಕಂಡಿಕೆ 8 (5)ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸದರಿ ಉಪಬಂಧವನ್ನು ಈ ಕೆಳಕಂಡಂತೆ ಉದ್ದರಿಸಲಾಗಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

8(5) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರುಚುನಾಯಿತನಾದಲ್ಲಿ 2ನೇ ಅವಧಿಗೆ ಮಾತ್ರ ಆತನನ್ನು ಮುಂದುವರೆಸಬಹುದು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಜ್ಯ ಮಟ್ಟದ ಸಂಘಟನೆಯಾಗಿದ್ದು, ಸದರಿ ಸಂಘಕ್ಕೆ ಸರ್ಕಾರದ ಮಾನ್ಯತೆಯನ್ನು ನೀಡಲಾಗಿರುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವರ್ಗಾವಣೆ ಮಾರ್ಗಸೂಚಿಗಳು ಪ್ರತ್ಯೇಕ ಅಧಿನಿಯಮ/ನಿಯಮಗಳು ಅನ್ವಯವಾಗುವ ಕೆಲವು ಇಲಾಖೆಗಳನ್ನು ಹೊರತುಪಡಿಸಿ, ಇತರ ಇಲಾಖೆಗಳ ನೌಕರರ ವರ್ಗಾವಣೆಗಳಿಗೆ ಅನ್ವಯವಾಗುತ್ತವೆ. ಆದಾಗ್ಯೂ, ಯಾವುದೇ ನೌಕರನು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಕಂಡಿಕೆ 8(5)ರ ಪ್ರಕಾರ ವರ್ಗಾವಣೆಯಿಂದ ವಿನಾಯಿತಿ ನೀಡಬೇಕಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular