HomeKarnatakaBIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ: ಒತ್ತುವರಿ ತೆರವು ಅಧಿಕಾರ...

BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ: ಒತ್ತುವರಿ ತೆರವು ಅಧಿಕಾರ ತಹಶೀಲ್ದಾರ್ ಗೆ: ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಭೂ ಕಂದಾಯ(ಮೂರನೇ ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ.

ಕೈಗಾರಿಕೆಗಳನ್ನು ಸ್ಥಾಪಿಸಲು ಎರಡು ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿಗೆ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಭೂ ವ್ಯಾಜ್ಯ ಪ್ರಕರಣಗಳ ಆದೇಶಗಳಲ್ಲಿ ಮೇಲ್ಮನವಿ ಹೋಗಲು ಕರ್ನಾಟಕ ಭೂ ಕಂದಾಯ ಅಪೀಲು ನ್ಯಾಯಾಧಿಕರಣ ರಚನೆಗೆ ಅವಕಾಶ ಕಲ್ಪಿಸಲಾಗಿದೆ.

ಕೈಗಾರಿಕಾ ವಲಯ ಎಂದು ವರ್ಗೀಕರಣ ಮಾಡಿರುವ ಪ್ರದೇಶದಲ್ಲಿ ಎರಡು ಎಕರೆವರೆಗಿನ ಜಮೀನನ್ನು ಭೂ ಪರಿವರ್ತನೆ ಮಾಡಲು ಕೈಗಾರಿಕಾ ಉದ್ದೇಶಕ್ಕೆ ಬಳಕೆ ಮಾಡಲು ಅವಕಾಶ ಮಾಡಿಕೊಡುವ 2024ನೇ ಸಾಲಿನ ಭೂ ಕಂದಾಯ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ 1961ರ ಮೇರೆಗೆ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮೂಲಕ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ. ಇದರಲ್ಲಿ ಕೈಗಾರಿಕಾ ವಲಯವಾಗಿ ಗುರುತಿಸಿದ ಜಮೀನಿನಲ್ಲಿ ಎರಡು ಎಕರೆವರೆಗೆ ಭೂ ಪರಿವರ್ತನೆ ಮಾಡದೇ ಕೈಗಾರಿಕೆಗೆ ಬಳಸಿಕೊಳ್ಳಬಹುದಾಗಿದೆ ಎಂದು ತಿದ್ದುಪಡಿ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದು, ಕೈಗಾರಿಕೆ ವಲಯ ಎಂದು ನಿಗದಿಯಾದ ಜಾಗದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಎರಡು ಎಕರೆ ವರೆಗಿನ ಭೂಮಿಗೆ ಭೂ ಪರಿವರ್ತನೆ ಮಾಡಬೇಕಿಲ್ಲ. ಹಳದಿ, ಹಸಿರು ವಲಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೂ ಇದು ಅನ್ವಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇದೇ ಕಾಯ್ದೆಯ ಸೆಕ್ಷನ್ 67, 104 ಮತ್ತು 136 ಅನ್ನು ಕೂಡ ತಿದ್ದುಪಡಿ ಮಾಡಲಾಗಿದ್ದು, ಸರ್ಕಾರಿ ಜಾಗ ಒತ್ತುವರಿ ಮಾಡಿದ್ದರೆ ತೆರವುಗೊಳಿಸುವ ಅಧಿಕಾರವನ್ನು ತಹಶೀಲ್ದಾರ್ ಅವರಿಗೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular