ಬಳ್ಳಾರಿಯಲ್ಲಿ ಇಂದಿನಿಂದ ರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.02ರಿಂದ ಜ.15ರವರೆಗೆ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ಗಡಿಗಿ ಚೆನ್ನಪ್ಪ ವೃತ್ತದ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ.

ನವದೆಹಲಿಯ ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ, ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿ,(ಕಾವೇರಿ ಹ್ಯಾಂಡಲೂಮ್ಸ್), ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಜ.02ರಂದು ಸಂಜೆ 04 ಗಂಟೆಗೆ ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮೇಳ ಉದ್ಘಾಟಿಸಲಿದ್ದಾರೆ.

ಕೈಮಗ್ಗ ಮತ್ತು ಜವಳಿ, ಕಬ್ಬು ಹಾಗೂ ಸಕ್ಕರೆ ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಉಪಸ್ಥಿತಿ ಇರುವರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮಹಾಪೌರರಾದ ಬಿ.ಜಾನಕಿ, ಕಾವೇರಿ ಹ್ಯಾಂಡ್ಲೂಮ್ಸ್ನ ಅಧ್ಯಕ್ಷರಾದ ಬಿ.ಜೆ.ಗಣೇಶ್, ಕಾವೇರಿ ಹ್ಯಾಂಡ್ಲೂಮ್ಸ್ನ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷರಾದ ಎನ್.ವಿರೂಪಾಕ್ಷ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರು ಹಾಗೂ ಜವಳಿ ಅಭಿವೃದ್ಧಿ ಆಯುಕ್ತರಾ ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಶ್ರೀಧರ ನಾಯಕ, ಉತ್ತರ ವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ವೀರೇಶ್ ಎಸ್.ಢವಳೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ್, ಜವಳಿ ಮಂತ್ರಾಲಯದ ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು, ಜಿಪಂ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಬಿ.ವಿಠಲ ರಾಜು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಆರ್.ಲಿಂಗರಾಜು ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read