ರಾಜ್ಯಾದ್ಯಂತ ‘ಕನ್ನಡ ಕಲಿಕೆ’ ಕಾರ್ಯಕ್ರಮ ವಿಸ್ತರಣೆ

ಬೆಂಗಳೂರು: ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಅನ್ಯ ಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಇದುವರೆಗೆ ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಕನ್ನಡ ಕಲಿಕಾ ಕಾರ್ಯಕ್ರಮವನ್ನು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಈ ಸಂಬಂಧ ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಉದ್ಯಮ, ಬ್ಯಾಂಕುಗಳು, ಕೇಂದ್ರ ಸರ್ಕಾರ ಕಚೇರಿಗಳು ರಾಜ್ಯಾದ್ಯಂತ ಇವೆ. ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಭಾಷಿಕರಿದ್ದಾರೆ. ಬೇರೆ ರಾಜ್ಯಗಳಿಂದ ವ್ಯಾಪಾರ ವ್ಯವಹಾರಗಳಿಗೆ ಬಂದು ಕರ್ನಾಟಕದಲ್ಲಿ ನೆಲೆಸಿರುವವರನ್ನು ಗುರುತಿಸಿ ಕನ್ನಡ ಕಲಿಸುವ ಪ್ರಯತ್ನವನ್ನು ಪ್ರಾಧಿಕಾರ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈ ಅಭಿಯಾನಕ್ಕೆ ಆಸಕ್ತ ಸಂಘ ಸಂಸ್ಥೆಗಳು ಜಿಲ್ಲಾಡಳಿತದಡಿ ನೋಂದಾಯಿಸಿಕೊಳ್ಳಬಹುದು. ಜಿಲ್ಲಾಡಳಿತ ತರಗತಿ ನಡೆಸಲು ಸ್ಥಳಾವಕಾಶ ಕಲ್ಪಿಸಲಿದೆ. ಜಿಲ್ಲಾ ಆಡಳಿತದಿಂದ ನೇಮಿಸುವ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಪ್ರಾಧಿಕಾರವೇ ನೀಡಲಿದೆ. ಬೋಧನೆಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಅನ್ಯ ಭಾಷಿಕರಿಗೆ ವಾರದಲ್ಲಿ ಮೂರು ದಿನಗಳಂತೆ ಮೂರು ತಿಂಗಳು ತರಗತಿ ನಡೆಸಲಾಗುವುದು. ಕಲಿಕಾರ್ಥಿಗಳಿಂದ ಶಿಕ್ಷಕರ ಬೋಧನಾ ಗುಣಮಟ್ಟ ಅಳೆಯಲು ತೀರ್ಮಾನಿಸಲಾಗಿದೆ. ಈ ಪ್ರಯತ್ನದಲ್ಲಿ ವೃತ್ತಿಪರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read