HomeLatest NewsGOOD NEWS : ರಾಜ್ಯಾದ್ಯಂತ ‘ಗೃಹ ಆರೋಗ್ಯ’ ಸೇವೆ ಯೋಜನೆ ವಿಸ್ತರಣೆ : ಈ ಎಲ್ಲಾ...

GOOD NEWS : ರಾಜ್ಯಾದ್ಯಂತ ‘ಗೃಹ ಆರೋಗ್ಯ’ ಸೇವೆ ಯೋಜನೆ ವಿಸ್ತರಣೆ : ಈ ಎಲ್ಲಾ ಸೇವೆಗಳು ನಿಮ್ಮ ಮನೆ ಬಾಗಿಲಿಗೆ.!

ಬೆಂಗಳೂರು : ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಈ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೆ 19-29 ವರ್ಷ ವಯಸ್ಸಿನವರಿಗೆ ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಉಚಿತವಾಗಿ ನಡೆಸಲಾಗುವುದು. ರೋಗನಿರ್ಣಯವಾದ ನಂತರ, ವ್ಯಕ್ತಿಗಳು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದು.

ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗಲಿದ್ದಾರೆ.

ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular