HomeKarnatakaಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಪರೀಕ್ಷೆ ಕಡಿತ: 2, 4, 6ನೇ ಸೆಮಿಸ್ಟರ್...

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಪರೀಕ್ಷೆ ಕಡಿತ: 2, 4, 6ನೇ ಸೆಮಿಸ್ಟರ್ ಗೆ ಮಾತ್ರ ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈಗಿರುವ ಸೆಮಿಸ್ಟರ್ ಪರೀಕ್ಷೆಯನ್ನು ಅರ್ಧದಷ್ಟು ಕಡಿಮೆ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಎರಡು, ನಾಲ್ಕು, ಆರನೇ ಸೆಮಿಸ್ಟರ್ ಗೆ ಮಾತ್ರ ಲಿಖಿತ ಪರೀಕ್ಷೆ ನಡೆಸಿ, ಒಂದು, ಮೂರು, ಐದನೇ ಸೆಮಿಸ್ಟರ್ ಗೆ ಲಿಖಿತ ಪರೀಕ್ಷೆ ಬೇಡ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳ ತರಗತಿ ಭಾಗವಹಿಸುವಿಕೆ, ವರದಿ ಬರೆಯುವುದು, ಕ್ಷೇತ್ರ ವೀಕ್ಷಣೆ ಸೇರಿ ಇತರ ಚಟುವಟಿಕೆಗಳ ಆಧಾರದಲ್ಲಿ ಮೌಲ್ಯಮಾಪನ ನಡೆಸಿ ಫಲಿತಾಂಶ ನೀಡಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಎಲ್ಲಾ ಸರ್ಕಾರಿ ವಿವಿಗಳಲ್ಲಿ ಏಕರೂಪ ಶುಲ್ಕ ಜಾರಿಗೆ ಉನ್ನತ ಶಿಕ್ಷಣ ಇಲಾಖೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ನಿರ್ಗಮಿತ ಉಪಾಧ್ಯಕ್ಷ ಪ್ರೊ.ವೈ.ಎಸ್. ಸಿದ್ದೇಗೌಡ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕರೂಪ ಶುಲ್ಕ ತಜ್ಞರ ಸಮಿತಿ ಅಡಿ ರಾಯಚೂರು ವಿವಿ ಕುಲಪತಿ ಡಾ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯ ನಾಲ್ವರು ತಜ್ಞರನ್ನು ಒಳಗೊಂಡ ಎರಡನೆ ಉಪಸಮಿತಿಯು ಹಾಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಶಿಫಾರಸು ಮಾಡಿ ವರದಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular