HomeInternationalಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗ್ರೀನ್ ಕಾರ್ಡ್ ಬದಲು ಉದ್ಯೋಗ ಕಾರ್ಡ್ ನೀಡಲು ಅಮೆರಿಕ ನಿರ್ಧಾರ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗ್ರೀನ್ ಕಾರ್ಡ್ ಬದಲು ಉದ್ಯೋಗ ಕಾರ್ಡ್ ನೀಡಲು ಅಮೆರಿಕ ನಿರ್ಧಾರ

ವಾಷಿಂಗ್ಟನ್: ಅನೇಕ ವರ್ಷಗಳಿಂದ ಕಾಯುತ್ತಿದ್ದ ಲಕ್ಷಾಂತರ ಭಾರತೀಯರಿಗೆ ಅಮೆರಿಕದಿಂದ ಸಿಹಿ ಸುದ್ದಿ ಸಿಕ್ಕಿದೆ. ಅಮೆರಿಕದ ಕಾಯಂ ನಿವಾಸಿ ಅಥವಾ ನಾಗರೀಕನಾಗಲು ನೀಡುತ್ತಿದ್ದ ಗ್ರೀನ್ ಕಾರ್ಡ್ ಬದಲಿಗೆ ಐದು ವರ್ಷಗಳ ಕಾಲ ಅಮೆರಿಕದಲ್ಲಿ ಉದ್ಯೋಗ ಮಾಡಲು ಅವಕಾಶ ನೀಡುವ ಉದ್ಯೋಗ ಪರವಾನಿಗೆ ಕಾರ್ಡ್ ಗಳನ್ನು ವಿತರಿಸಲು ಅಮೆರಿಕ ಸರ್ಕಾರ ನಿರ್ಧರಿಸಿದೆ.

ಈ ಉದ್ಯೋಗ ಕಾರ್ಡ್ ಐದು ವರ್ಷಗಳ ಮಾನ್ಯತೆ ಹೊಂದಿರುತ್ತದೆ. ಅಮೆರಿಕದಲ್ಲಿ ಕೆಲಸ ಮಾಡಲು ಅಧಿಕಾರ ನೀಡಲಿದೆ. ನಂತರ ಮತ್ತೆ ಉದ್ಯೋಗ ಕಾರ್ಡ್ ನವೀಕರಣ ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಗ್ರೀನ್ ಕಾರ್ಡ್ ಗಾಗಿ ಕಾಯುತ್ತಿರುವವರ ಸಂಖ್ಯೆಯನ್ನು ಕಡಿಮೆ ಮಾಡಲು ಅಮೆರಿಕ ಸರ್ಕಾರ ಮುಂದಾಗಿದೆ. ಭಾರತದಿಂದ ಗ್ರೀನ್ ಕಾರ್ಡ್ ಗಾಗಿ ಕಾಯುತ್ತಿರುವ 11 ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದೆ. ಉದ್ಯೋಗ ಕಾರ್ಡ್ ಪಡೆದವರಿಗೆ ಮುಂದಿನ್ ದಿನಗಳಲ್ಲಿ ಗ್ರೀನ್ ಕಾರ್ಡ್ ನೀಡಿದಲ್ಲಿ ಆ ಸೌಲಭ್ಯವನ್ನು ಕೂಡ ಪಡೆಯುವ ಅವಕಾಶವಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular