HomeKarnatakaಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಸ್ಸಾಂ ಮೂಲದ ಜಲಾಲುದ್ದೀನ್ ಎಂಬಾತ ಸ್ಫೋಟದ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ಬಂಧಿತ ಆರೋಪಿಗಳನ್ನು ಜಲಾಲುದ್ದೀನ್ @ ಜಾಹಿದ್ ವುಲ್ ಹುಸೇನ್, ಸೈದುಲಾ ಇಸ್ಲಾಂ ಹಾಗೂ ಅಹ್ಮದ್ ಎಂದು ಗುರುತಿಸಲಾಗಿದೆ.

ಬುರ್ಹಾನ್ ಬಾಂಬ್ ತಯಾರು ಮಾಡಿದ್ದ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಬಾಂಬ್ ತಯಾರಿಸಿದ್ದರು. ವೈಯಕ್ತಿಕ ಕಾರಣಕ್ಕಾಗಿ ಸ್ಪೋಟ ಮಾಡಿರುವುದು ಪತ್ತೆಯಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ದಸರಾ ಹಿಂದಿನ ದಿನರಾತ್ರಿ ಈ ಘಟನೆ ನಡೆದಿತ್ತು. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿತ್ತು. ಪ್ರಕರಣದ ತನಿಖೆಗೆ 10ಕ್ಕೂ ಹೆಚ್ಚು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ರಾಯಚೂರು, ಅಸ್ಸಾಂ ಪೊಲೀಸರು ತನಿಖೆ ಕೆಲಸ ಮಾಡಿದ್ದಾರೆ. ಪ್ರಕರಣ ಸಂಬಂಧ 1500 ಸಿಸಿಟಿವಿಗಳ ಪರಿಶೀಲನೆ ಮಾಡಲಾಗಿದೆ. ನೂರಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ. ಸೈದುಲಾ ಜಲಾಲುದ್ದೀನ್ ಮೂಲಕ ಬಾಂಬ್ ಕೊಡಿಸಿದ್ದ. ಮಸ್ಕಿಯಿಂದ ಬೆಂಗಳೂರಿಗೆ ಬಸ್ ನಲ್ಲಿ ಬಾಂಬ್ ತರಲಾಗಿತ್ತು. ಜಲಾಲುದ್ದೀನ್ ಎಲೆಕ್ಟ್ರಿಕಲ್ ಮತ್ತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಆತನಿಗೆ ಸರ್ಕ್ಯೂಟ್ ಮತ್ತು ಬಾಂಬ್ ತಯಾರಿಸುವ ಮಾಹಿತಿಯಿತ್ತು. ಬಾಂಬ್ ತಯಾರಿಸುವುದನ್ನು ಕಲಿತುಕೊಂಡಿದ್ದಾನೆ. ಬಾಂಬ್ ನಲ್ಲಿ ಸ್ಪೋಟಕ ವಸ್ತು ಇಡಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಹಿನ್ನೆಲೆ, ಸ್ಫೋಟಕ್ಕೆ ಬಳಸಲಾದ ವಸ್ತುಗಳು ಹಾಗೂ ಇತರರ ಪಾತ್ರದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮದುವೆ ಮುರಿದಿದ್ದೇ ದ್ವೇಷಕ್ಕೆ ಕಾರಣ?

ಮಾಹಿತಿಯ ಪ್ರಕಾರ, ಆರೋಪಿ ಜಲಾಲುದ್ದೀನ್ ಮತ್ತು ಅಲ್ಲಾವುದ್ದೀನ್ ಎಂಬಾತನ ನಡುವೆ ವೈಯಕ್ತಿಕ ವೈಷಮ್ಯವಿತ್ತು ಎನ್ನಲಾಗಿದೆ. ಜಲಾಲುದ್ದೀನ್ ಮದುವೆಯಾಗಲು ಮುಂದಾಗಿದ್ದ ಸಂದರ್ಭದಲ್ಲಿ ಅಲ್ಲಾವುದ್ದೀನ್ ಹುಡುಗಿಯ ಮನೆಯವರಿಗೆ ಆತನ ಬಗ್ಗೆ ಆಕ್ಷೇಪಾರ್ಹ ಮಾಹಿತಿ ನೀಡಿದ್ದರಿಂದ ಮದುವೆ ಮುರಿದುಬಿದ್ದಿತ್ತು ಎಂದು ಹೇಳಲಾಗಿದೆ.

ಇದರಿಂದ ಜಲಾಲುದ್ದೀನ್, ಅಲ್ಲಾವುದ್ದೀನ್ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ ಎನ್ನಲಾಗಿದ್ದು, ಇದೇ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮೂವರ ಬಂಧನ: ತನಿಖೆ ಚುರುಕು

ಪ್ರಕರಣದ ಕುರಿತು ತನಿಖೆ ಕೈಗೊಂಡ ಪುಲಿಕೇಶಿನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸ್ಫೋಟದ ಹಿಂದೆ ವೈಯಕ್ತಿಕ ದ್ವೇಷವೊಂದೇ ಕಾರಣವಾಗಿತ್ತೇ, ಘಟನೆಯಲ್ಲಿ ಇತರರು ಸಹಕರಿಸಿದ್ದಾರೆಯೇ ಮತ್ತು ಸ್ಫೋಟಕ್ಕೆ ಬಳಸಿದ ವಸ್ತುಗಳನ್ನು ಎಲ್ಲಿಂದ ತರಲಾಗಿತ್ತು ಎಂಬ ಅಂಶಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ವೈಯಕ್ತಿಕ ದ್ವೇಷಕ್ಕೆ ಅಸ್ಸಾಂ ಮೂಲದ ಜಲಾಲುದ್ದೀನ್ ಕೃತ್ಯ ಎಸಗಿದ್ದಾನೆ. ಅಲ್ಲಾಹುದ್ದೀನ್ ಜೊತೆಗೆ ಆರೋಪಿ ಜಲಾಲುದ್ದೀನ್ ವೈಷಮ್ಯ ಹೊಂದಿದ್ದ. ಆರೋಪಿ ಜಲಾಲುದ್ದೀನ್ ಮದುವೆಯನ್ನು ಅಲ್ಲಾವುದ್ದೀನ್ ಮುರಿದಿದ್ದ. ಹುಡುಗಿ ಮನೆಯವರಿಗೆ ಈತ ಸರಿ ಇಲ್ಲ ಎಂದು ಹೇಳಿದ್ದ. ಅದೇ ದ್ವೇಷದಿಂದ ಆರೋಪಿ ಸ್ಪೋಟ ಮಾಡಿದ್ದಾನೆ. ಆದರೆ, ಅದೃಷ್ಟವಶಾತ್ ಅಲ್ಲಾವುದ್ದೀನ್ ಪಾರಾಗಿದ್ದಾನೆ. ಸದ್ಯ ಮೂವರನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular