
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಏಳು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಏಳು ಜನರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

