ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯ ಎದುರು ಜಯ ಮಾರ್ಯಾಂಡ ದ್ವಾರದ ಬಳಿ ಗುರುವಾರ ರಾತ್ರಿ ಬಲೂನ್ ಗೆ ಹೀಲಿಯಂ ತುಂಬುವ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಸ್ಪೋಟದಿಂದ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರ ಬೀದಿ ನಿವಾಸಿ ಮಂಜುಳಾ(28), ಬೆಂಗಳೂರಿನ ಬ್ಯಾಡರಹಳ್ಳಿ ಲಕ್ಷ್ಮಿ(41) ಶುಕ್ರವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದ ಜಿಲ್ಲೆಯ ತೋಫಿಯಾ ಗ್ರಾಮದ ಸಲೀಂ(40) ಅರಮನೆ ಸಮೀಪ ಸೈಕಲ್ ನಲ್ಲಿ ಹೀಲಿಯಂ ಬಲೂನ್ ಮಾರುತಿದ್ದಾಗ ಸ್ಪೋಟ ಸಂಭವಿಸಿ ಮೃತಪಟ್ಟಿದ್ದರು.
ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

