HomeKarnataka'ಸೌಜನ್ಯ' ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸಬಹುದು : ಮಾಜಿ ಶಾಸಕ ‘ವಸಂತ ಬಂಗೇರ’...

‘ಸೌಜನ್ಯ’ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸಬಹುದು : ಮಾಜಿ ಶಾಸಕ ‘ವಸಂತ ಬಂಗೇರ’ ಸ್ಪೋಟಕ ಹೇಳಿಕೆ

ಬೆಂಗಳೂರು : ‘ಸೌಜನ್ಯ’ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣವನ್ನು ಮರು ತನಿಖೆಗೆ ನೀಡಬೇಕೆಂದು ಭಾರಿ ಹೋರಾಟ ನಡೆಯುತ್ತಿದೆ.

ಸೌಜನ್ಯ ಪ್ರಕರಣದ ಬಗ್ಗೆ ಶಾಸಕ ‘ವಸಂತ ಬಂಗೇರ’ ಸ್ಪೋಟಕ ಹೇಳಿಕೆ ನೀಡಿದ್ದು,ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಿದ್ದು ಯಾರು..? ಇದರಲ್ಲಿ ಯಾರ ಕೈವಾಡವಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ, ಎಲ್ಲಾ ಸತ್ಯಗಳನ್ನು ನಾನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಲು ಬಹುದು ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಹಾಗೂ ಹಲವು ಅಮಾನುಷ ಹತ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿಸಿದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದರು. ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುವ ನಂಬಿಕೆಯಿತ್ತು, ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಅನ್ನೋದು ನನಗೆ ತಿಳಿಯಿತು. ಸಿಬಿಐ ತನಿಖೆಯ ದಿಕ್ಕು ತಪ್ಪಿಸಲಾಯಿತು. ಅದನ್ನ ಈಗ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದರು. ಒಂದಲ್ಲ ಒಂದು ದಿನ ಕಾಲ ಬರುತ್ತದೆ. ಅಂದು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು..? ಯಾರನ್ನು ತನಿಖೆ ಮಾಡಬೇಕು,  ಎಂದು ಹೇಳುತ್ತೇನೆ ಎಂದಿದ್ದಾರೆ. ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸಬಹುದು ಎಂದು  ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular