HomeKarnatakaBIG NEWS : ಬೆಂಗಳೂರಿನ 'ಟಿಕ್ ಟಾಕ್ ಸ್ಟಾರ್' ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

BIG NEWS : ಬೆಂಗಳೂರಿನ ‘ಟಿಕ್ ಟಾಕ್ ಸ್ಟಾರ್’ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ಮೈಸೂರು : ಬೆಂಗಳೂರಿನ ಟಿಕ್ ಟಾಕ್ ಸ್ಟಾರ್ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ.
ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಕೊಲೆ ಸೇಡಿಗಾಗಿ ನವೀನ್ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ನವೀನ್ ಕೊಲೆ ಸಂಬಂಧ ಎಂಟು ಜನ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ನಡೆದಿದ್ದ ವಿನೋದ್ ಎಂಬುವವರ ಕೊಲೆ ಪ್ರಕರಣದಲ್ಲಿ ನವೀನ್ ಜೈಲಿಗೆ ಹೋಗಿ ಬಂದಿದ್ದನು ಎನ್ನಲಾಗಿದೆ. ನಂತರ ಟಿಕ್ ಟಾಕ್ ಮಾಡುತ್ತಿದ್ದರಿಂದ ಈತ ಟಿಕ್ ಟಾಕ್ ಸ್ಟಾರ್ ಎಂದೇ ಫೇಮಸ್ ಆಗಿದ್ದನು. ಆ ಕೊಲೆ ಸೇಡಿಗಾಗಿ ನವೀನ್ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯ ಜೊತೆಗೆ ಮೈಸೂರು ಪ್ರವಾಸಕ್ಕೆ ಹೋಗಿದ್ದ ವೇಳೆ ನವೀನ್ ನ್ನು ಕಿಡ್ನಾಪ್ ಮಾಡಲಾಗಿತ್ತು. ನಂತರ ಮೈಸೂರಿನಲ್ಲಿ ನವೀನ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಸದ್ಯ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular