BREAKING NEWS: ಸಿಡಿಮದ್ದು ತಯಾರಿಸುವಾಗ ಭೀಕರ ಸ್ಫೋಟ: ವ್ಯಕ್ತಿ ಸಜೀವದಹನ

ಬೆಳಗಾವಿ: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ದುರಂತ ಸಂಭವಿಸಿದ್ದು, ಸಿಡಿಮದ್ದು ಏಕಾಏಕಿ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವದಹನವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿಯಲ್ಲಿ ನಡೆದಿದೆ.

ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ. ಪಂಚಮಿ ಹಬ್ಬದಲ್ಲಿ ಹಾರಿಸಲು ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಿಡಿಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಮಲ್ಲಪ್ಪ ಸಜೀವದಹನವಾಗಿದ್ದಾರೆ.

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read