HomeIndiaಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಕಾರು ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ

ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಕಾರು ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ

ನವದೆಹಲಿ: ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ಕಾರೊಂದು ಪಲ್ಟಿಯಾಗಿ ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ದೆಹಲಿಯಿಂದ ಬಲಿಯಾಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ದೆಹಲಿ ನಿವಾಸಿಗಳಾದ ಐವರು ಕೆಲಸದ ನಿಮಿತ್ತ ಬಲಿಯಾಗೆ ತೆರಳುತ್ತಿದ್ದರು. ಬೆಳಗ್ಗೆ ಸುಮಾರು 7:30ರ ವೇಳೆಗೆ ದೌಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಇಮ್ರಾನ್ ಅಹ್ಮದ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಜೈಪ್ರಕಾಶ್ (32), ಭೂಪೇಂದ್ರ (35) ಮತ್ತು ಕಪಿಲ್ (31) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಯಶವಂತ್ (33) ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಚಂದ್ರಕಾಂತ್ (35) ಗಾಯಗೊಂಡಿದ್ದಾರೆ. ಕಾರಿನ ವೇಗ ಗಂಟೆಗೆ ಸುಮಾರು 140 ಕಿ.ಮೀ. ಇತ್ತು ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಕಾರಿನಿಂದ ಕೆಳೆಗೆ ಬಿದ್ದಿದ್ದಾರೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ: ವಾರದ ಬಳಿಕ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆ

ಹಾಸನ: ನವವಿವಾಹಿತೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದು, ಎಂಟು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ನವವಿವಾಹಿತೆಯ ಮೃತದೇಹ ಪತ್ತೆಯಾಅಗಿದೆ. 8 ದಿನಗಳಿಂದ ನಾಪತ್ತೆಯಾಗಿದ್ದ ಪ್ರಿಯಾಂಕಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.

ಸೆ.19ರ ರಾತ್ರಿ ಚನ್ನರಾಯಪಟ್ಟಣ ತಾಲ್ಲೂಕಿನ, ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ಪತಿ ರಾಜಶೇಖರ್ ಎದುರೇ ಪ್ರಿಯಾಂಕಾ ನಾಲೆಗೆ ಜಿಗಿದಿದ್ದರು. ಪತಿ ರಾಜಶೇಖರ್ ನಾಲೆಗೆ ತಳ್ಳಿದ್ದಾನೆಂದು ಪ್ರಿಯಾಂಕಾ ಪೋಷಕರು ಆರೋಪಿಸಿದ್ದರು.

ಆಕೆಗೆ ಈಜು ಬರುತ್ತದೆ, ಅವಳಿಗೆ ಮೊದಲೆ ಮದುವೆಯಾಗಿತ್ತು ಎಂದು ರಾಜಶೇಖರ್ ಪೋಷಕರು ಪ್ರತ್ಯಾರೋಪ ಮಾಡಿದ್ದರು. ಹೇಮಾವತಿ ನಾಲೆಯಲ್ಲಿ ನೀರು ನಿಲ್ಲಿಸಿದ ಹಿನ್ನೆಲೆ ಇಂದು ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಪ್ರಿಯಾಂಕಾ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular