HomeLatest NewsBREAKING : ರಾಜ್ಯದ ಶಾಲೆಗಳ 'ದಸರಾ ರಜಾ' ಅವಧಿ ವಿಸ್ತರಿಸಿ : ಸಚಿವ ಮಧು ಬಂಗಾರಪ್ಪಗೆ...

BREAKING : ರಾಜ್ಯದ ಶಾಲೆಗಳ ‘ದಸರಾ ರಜಾ’ ಅವಧಿ ವಿಸ್ತರಿಸಿ : ಸಚಿವ ಮಧು ಬಂಗಾರಪ್ಪಗೆ ‘ಸರ್ಕಾರಿ ನೌಕರರ ಸಂಘ’ ಮನವಿ

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ: 20-09-2025 ರಿಂದ 07-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆಯಾಗಿರುತ್ತದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ದಿನಾಂಕ:22-09-2025 ರಿಂದ 07-10-2025ರ ವರೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿರುತ್ತದೆ. ಗಣತಿ ಕಾರ್ಯದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಗಣತಿ ಕಾರ್ಯ ಪೂರ್ಣಗೊಂಡಿರುವುದಿಲ್ಲ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಗಣತಿ ಕಾರ್ಯ ದಿನಾಂಕ: 05-10-2025 ರಿಂದ ಪ್ರಾರಂಭವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ: 08-10-2025ರೊಳಗೆ ಗಣತಿ ಕಾರ್ಯ ಪೂರ್ಣಗೊಳ್ಳದೇ ಇರುವುದರಿಂದ ಹಾಗೂ ಶಾಲಾ ರಜಾ ಅವಧಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರುಗಳು ದೈಹಿಕ ಹಾಗೂ ಭೌದ್ಧಿಕವಾಗಿ ಒತ್ತಡದಲ್ಲಿ ಗಣತಿ ಕಾರ್ಯದ ಕರ್ತವ್ಯ ನಿರ್ವಹಿಸಿರುವುದರಿಂದ ಅವರುಗಳ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕಾಗಿ ರಜೆಯ ಅವಶ್ಯಕತೆ ಇರುವುದರಿಂದ, ದಿನಾಂಕ: 17-10-2025ರ ವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular