ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.
ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಪೇಟಿಎಂ/ನೆಟ್ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ರ ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ ತೆರಿಗೆಯನ್ನು ಪಾವತಿಸಿದ ರಸೀದಿಯನ್ನು ನೀಡಲಾಗುತ್ತದೆ.
ಏ.30 ರವರೆಗೆ ಆರ್ಥಿಕ ವರ್ಷ 2026-27 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ. 5% ರ ತೆರಿಗೆ ರಿಯಾಯಿತಿಯ ಸೌಲಭ್ಯದ ಕಾಲಾವಧಿ ಇರುತ್ತದೆ. ಜೂನ್ 30ರವೆಗೆ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿರುತ್ತದೆ.
ಜು. 01 ರ ನಂತರ ಪಾವತಿಸಿದಲ್ಲಿ ಮಾಸಿಕ ಶೇ. 2% ರಷ್ಟು ದಂಡದೊಂದಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಏಪ್ರಿಲ್ 2026ರ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಿ ಶೇ. 5%ರ ರಿಯಾಯಿತಿ ಪಡೆಯುವಂತೆ ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಉಪ ಆಯುಕ್ತರು ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.
ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್
ಶಿವಮೊಗ್ಗ : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 29 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ಭಾರತೀಯ ಸಭಾ ಭವನ ಎದುರು, ಆರ್.ಎಂ.ಎಲ್.ನಗರ, ಹಲ್ ಹಬಿಬ್ ಶಾಲೆ ಎದುರು, 1ನೇ ತಿರುವು, ಟಿಪ್ಪುನಗರ, ಸೀಗೇಹಟ್ಟಿ ಸರ್ಕಾರಿ ಶಾಲೆ ಆವರಣ, ಅಶೋಕನಗರ ನಂದಿನ ಬೂತ್, ಪೊಲೀಸ್ ಕ್ವಾಟ್ರಸ್ ಹತ್ತಿರ, ಕಾಶಿಪುರ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕೌಂಟರ್ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

