ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕ.ರಾ.ಮು.ವಿ ಮಡಿಕೇರಿಯಲ್ಲಿ 2025-26 ಸಾಲಿನ ಪ್ರವೇಶಾತಿಯ ಕೊನೆಯ ದಿನಾಂಕವನ್ನು ಅಕ್ಟೋಬರ್, 10 ರವರೆಗೆ ವಿಸ್ತರಿಸಲಾಗಿದೆ.ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗು ಸ್ನಾತಕೋತ್ತರ ಪಿ.ಜಿ. ಕೋರ್ಸ್ಗಳಾದ ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) 2025-26 ರ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಿಂದ ಹೊಸದಾಗಿ ಪ್ರಾರಂಭಿಸಿರುವ ಜ್ಯೋತಿರ್ ವಿಜ್ಞಾನ (ಪಲ ಜ್ಯೋತಿಷ್ಯ, ಮೇಧಿನಿ ಜ್ಯೋತಿಷ್ಯ ವಾಸ್ತು ಜ್ಯೋತಿಷ್ಯ) ಮತ್ತು ಲಿಂಗ್ವಿಸ್ಟಿಕ್ಸ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ.

ಪ್ರವೇಶಾತಿಗೆ ಎಸ್.ಎಸ್.ಲ್.ಸಿ ಅಂಕಪಟ್ಟಿ ಪ್ರತಿ. ಪಿ.ಯು.ಸಿ ಅಥವಾ ತತ್ಸಮಾನ ಅಂಕಪಟ್ಟಿ ಪ್ರತಿ,. ಪದವಿ ಅಂಕಪಟ್ಟಿ ಪ್ರತಿ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಪ್ರತಿ. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ನ ಹೆಸರು, ಐಎಪ್ಎಸ್ಸಿ ಕೋಡ್, ನಾಲ್ಕು ಫೆÇೀಟೋಗಳು, ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್ / ಫೋನ್ ಪೇ / ಗೂಗಲ್ ಪೇ / ನೆಟ್ ಬ್ಯಾಂಕಿಂಗ್ – ಶುಲ್ಕ ಪಾವತಿಗಾಗಿ.ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಹಾಗೂ 8296215714, 9483570900, 9844395986 ನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read