ವಿದ್ಯಾರ್ಥಿಗಳ ಗಮನಕ್ಕೆ : ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : 2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕ ವಿನಾಯಿತಿ ಸೌಲಭ್ಯಕ್ಕೆ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 17 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್postmatrichelp@karnataka.gov.in ದೂ.ಸಂ.080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read