HomeKarnatakaBIG NEWS : ರಾಜ್ಯದ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ...

BIG NEWS : ರಾಜ್ಯದ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2024-25ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಉಲ್ಲೇಖ(6)ರ ಸುತ್ತೋಲೆ ನೀಡಲಾಗಿತ್ತು.ಉಲ್ಲೇಖ(8)ರ ದಿನಾಂಕ:09-01-2025 ಸುತ್ತೋಲೆಯಂತೆ ಶಾಲಾ ಆಡಳಿತ ಮಂಡಳಿಗಳಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ:10-01-2025 ರಿಂದ 31-01-2025ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ಆದಾಗ್ಯೂ ಕೆಲವು ಶಾಲೆಗಳು 2024-25ನೇ ಸಾಲಿನಲ್ಲಿ ನೀಡಿದ ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿರುವುದು ಹಾಗೂ ಹಲವು ಶಾಲೆಗಳ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಗಳು ದಾಖಲೆ/ಮಾಹಿತಿಗಳ ಕೊರತೆಯ ಕಾರಣದಿಂದ ತಿರಸ್ಕೃತಗೊಂಡಿರುತ್ತವೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನಿತ/ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಿಕೊಳ್ಳುವ ಮತ್ತು ಆ ರೀತಿ ಮಾನ್ಯತೆ ನವೀಕರಣ ಮಾಡಿಕೊಳ್ಳಲು ವಿಫಲರಾಗುವ ಶಾಲೆಗಳ ನೊಂದಣಿಯನ್ನು ನಿಯಮಾನುಸಾರ ರದ್ದುಪಡಿಸುವ ಮತ್ತು ಮಾನ್ಯತೆಯನ್ನು ಹಿಂಪಡೆಯುವ ಷರತ್ತಿಗೊಳಪಡಿಸಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊನೆಯ ಬಾರಿಗೆ ಮಾತ್ರ 2024-25ನೇ ಸಾಲಿನ ಮಾನ್ಯತೆ ನವೀಕರಣಕ್ಕೆ ಮಾತ್ರ ಅವಕಾಶ ನೀಡಲು ತೀರ್ಮಾನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular