HomeKarnatakaJOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 500 ಕ್ಕೂ ಹೆಚ್ಚು ಅಂಗನವಾಡಿ...

JOB ALERT : ಮಹಿಳೆಯರಿಗೆ ಗುಡ್ ನ್ಯೂಸ್ : 500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:05/01/2025ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು http://karnemakaone.kar.nic.in/abcd/ ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಸಲ್ಲಿಕೆಯ 02 ಮತ್ತು 03ನೇ ಹಂತದಲ್ಲಿ ಆಪ್ಲೋಡ್ ಮಾಡಿ 03ನೇ ಹಂತದಲ್ಲಿ ಇ-ಹಸ್ತಾಕ್ಷರವಾಗಿರುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ 04ನೇ ಹಂತದಲ್ಲಿ ಇ-ಸಹಿಯಾದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular