HomeLatest Newsಗಮನಿಸಿ : UPSC, KAS, RRB ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಗಮನಿಸಿ : UPSC, KAS, RRB ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, RRB & SSC ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ. ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ಅರ್ಜಿಗಳನ್ನು ಆಹ್ವಾನಿಸಿದ್ದು, ಆ.11 ರವರೆಗೆ ವಿಸ್ತರಿಸಿ ಕೊನೆಯ ದಿನಾಂಕ ನಿಗಧಿಪಡಿಸಲಾಗಿತ್ತು.

ಸದರಿ ತರಬೇತಿಗೆ “ಸೇವಾ ಸಿಂಧು ಪೋರ್ಟಲ್”ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಆ.26 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ನಲ್ಲಿ ಸದರಿ ದಿನಾಂಕದ ವರೆಗೆ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/ 08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪಿರ್ಕಿಸಬಹುದಾಗಿದೆ. ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular