HomeLatest NewsBIG NEWS : 'DCET' ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ : ಅಭ್ಯರ್ಥಿಗಳಿಗೆ 'KEA' ಮುಖ್ಯ...

BIG NEWS : ‘DCET’ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ : ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ

ಬೆಂಗಳೂರು : DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಛಾಯ್ಸ್ ಆಯ್ಕೆ ಮಾಡಲು, ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಛಾಯ್ಸ್ ಆಯ್ಕೆ ಮಾಡಲು, ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಜು.22ರಂದು ಬೆಳಿಗ್ಗೆ 11 ಗಂಟೆವರೆಗೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.

ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಛಾಯ್ಸ್ 1 ಮತ್ತು 2 ಆಯ್ಕೆ ಮಾಡಿಕೊಂಡವರು ಮಾತ್ರ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಛಾಯ್ಸ್ -1 ದಾಖಲಿಸಿದವರು ಮಂಗಳವಾರವೇ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular