HomeBusinessಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ...

ಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ ಮಾಹಿತಿ

ನವದೆಹಲಿ: ಈ ವರ್ಷ ಸೆಪ್ಟೆಂಬರ್ 30 ರ ನಂತರ 2000 ರೂಪಾಯಿ ನೋಟುಗಳ ವಿನಿಮಯದ ಗಡುವಿನ ವಿಸ್ತರಣೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಇಂದು ಹೇಳಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪ್ರಕಾರ ಚಲಾವಣೆಯಲ್ಲಿರುವ 2000 ರೂಪಾಯಿ ಮುಖಬೆಲೆಯ ನೋಟುಗಳ ಮೌಲ್ಯ 84 ಸಾವಿರ ಕೋಟಿ ರೂಪಾಯಿಗಳು. ಕಳೆದ ತಿಂಗಳ 3 ರವರೆಗೆ ಚಲಾವಣೆಯಲ್ಲಿರುವ ಒಟ್ಟು ನೋಟುಗಳಲ್ಲಿ 2000 ರೂಪಾಯಿ ಮುಖಬೆಲೆಯ ಶೇಕಡಾವಾರು 2.51 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular