ಗಮನಿಸಿ : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆ.10 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಹೌದು, ಸೆಪ್ಟೆಂಬರ್ 1 ರಿಂದ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಆಗಸ್ಟ್ 24 ಇಂದು ಕೊನೆಯ ದಿನಾಂಕವಾಗಿತ್ತು, ಆದರೆ ಸರ್ವರ್ ಸಮಸ್ಯೆಯಿಂದ ಬಹಳ ಜನರು ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಿರಲಿಲಿಲ್ಲ. ಈ ಹಿನ್ನೆಲೆ ಸೆ.10 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.

ಚಾಲ್ತಿ ಇರುವ ಬಿಪಿಎಲ್ (BPL), ಎಪಿಎಲ್ (APL) ಪಡಿತರ ಚೀಟಿಗಳ ತಿದ್ದುಪಡಿ, ಮನೆ ಯಜಮಾನಿ ಬದಲಾವಣೆ, ಹೊಸ ಹೆಸರು ಸೇರ್ಪಡೆ ಅಥವಾ ಕೈಬಿಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ?

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

1) ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ
2)ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
3)ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
4)ಹೊಸ ಪೇಜ್ ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ 5)ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
6)ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
7)ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್ಡೇಟ್ 8)ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read