HomeLatest Newsಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಅವಧಿ ವಿಸ್ತರಣೆ

ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಅವಧಿ ವಿಸ್ತರಣೆ

ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆಗಳ ವಿಮೆ ನೋಂದಾಣಿಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ.

ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಹಸಿ ಮೆಣಸಿನಕಾಯಿ:*

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ.

*ದಾಳಿಂಬೆ:*

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು, ಕಂಪ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ. 9448511649, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ. 9740934208, ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ. 9448910277 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular