HomeKarnatakaಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ಅವಧಿ ವಿಸ್ತರಣೆ

ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಆರ್.ಟಿ.ಇ. ಶುಲ್ಕ, ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಹಕ್ಕು ಕಾಯಿದೆ 2009ರ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2025-26ನೇ ಸಾಲಿನ ಪ್ರಥಮ ಕಂತಿನ ಶುಲ್ಕ ಮರುಪಾವತಿಗೆ ಸಂಬಂಧಿಸಿದ ಶಾಲೆಗಳು ಆನ್‌ಲೈನ್ ಮೂಲಕ ಬೇಡಿಕೆ ಸಲ್ಲಿಸಲು ದಿನಾಂಕ:12.12.2025 ರಿಂದ 28.02.2026ರವರೆಗೆ ಉಲ್ಲೇಖ (3)ರಂತೆ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸದರಿ ಅವಧಿಯಲ್ಲಿ ಎಲ್ಲಾ ಶಾಲೆಗಳು ಬೇಡಿಕೆ ಸಲ್ಲಿಸದಿರುವುದರಿಂದ 2025-26ನೇ ಸಾಲಿನ ಆ‌ರ್.ಟಿ.ಇ. ಶುಲ್ಕ, ಮರುಪಾವತಿ ಬಾಕಿಯಿರುವ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶವಾಗಿ ದಿನಾಂಕ: 01.03.2026 ರಿಂದ 31.03.2026 ರವರೆಗೆ ಅವಧಿ ವಿಸ್ತರಿಸಿ, ಪ್ರಥಮ ಮತ್ತು ದ್ವಿತೀಯ ಕಂತಿನ ಶುಲ್ಕ ಮರುಪಾವತಿಗೆ ಸಂಬಂಧಿಸಿದ ಶಾಲೆಗಳು ಆನ್‌ಲೈನ್ ಮೂಲಕ ಬೇಡಿಕೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ 2025-26ರ ಆ‌ರ್.ಟಿ.ಇ. ಶುಲ್ಕ ಮರುಪಾವತಿಗೆ ಈವರೆಗೆ ಬೇಡಿಕೆ ಸಲ್ಲಿಸಿಲ್ಲದ ಶಾಲೆಗಳನ್ನು ಗುರುತಿಸಿ, ನೀಡಿರುವ ಕಾಲಾವಧಿಯೊಳಗೆ ಬೇಡಿಕೆ ಸಲ್ಲಿಸುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. ಅಂತಿಮ ದಿನಾಂಕದ ಒಳಗೆ ಯಾವುದೇ ಶಾಲೆ ಅರ್ಜಿ ಸಲ್ಲಿಸದೇ ಪುನ: ಅವಕಾಶ ಕೋರಿ ಮನವಿಗಳು ಸ್ವೀಕೃತವಾದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಸ್ಪಷ್ಟಪಡಿಸಿದೆ. ಉಳಿದಂತೆ ಉಲ್ಲೇಖ (3)ರ ಸುತ್ತೋಲೆಯಲ್ಲಿನ ಅಂಶಗಳು ಮುಂದುವರೆಯುತ್ತವೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular