HomeLatest NewsRTE ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ...

RTE ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು ಖಾಸಗಿ ಅನುದಾನರಹಿತ ಶಾಲೆಗಳಿಗೆ ಆರ್.ಟಿ.ಇ. (RTE) ಅಡಿಯಲ್ಲಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ.

2025-26ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಯ ಪ್ರಥಮ ಮತ್ತು ದ್ವಿತೀಯ ಕಂತಿನ ಬೇಡಿಕೆಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಇದ್ದ ಸಮಯಾವಕಾಶವನ್ನು ಈಗ 31 ಮಾರ್ಚ್ 2026 ರವರೆಗೆ ವಿಸ್ತರಿಸಲಾಗಿದೆ.ಈ ಮೊದಲು ಫೆಬ್ರವರಿ 28, 2026 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲಾಖೆಯು ಇದೀಗ ಶಾಲಾ ಆಡಳಿತ ಮಂಡಳಿಗಳಿಗೆ 01.03.2026 ರಿಂದ 31.03.2026 ರವರೆಗೆ ಅಂತಿಮ ಅವಕಾಶವನ್ನು ಕಲ್ಪಿಸಿದೆ.

ಅಧಿಕಾರಿಗಳಿಗೆ ಸೂಚನೆ: ನಿಗದಿತ ಸಮಯದೊಳಗೆ ಬೇಡಿಕೆ ಸಲ್ಲಿಸದ ಶಾಲೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಅರ್ಜಿ ಸಲ್ಲಿಸುವಂತೆ ಕ್ರಮ ಕೈಗೊಳ್ಳಲು ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.ಈ ವಿಸ್ತರಿಸಿದ ಅವಧಿಯ ನಂತರವೂ ಅರ್ಜಿ ಸಲ್ಲಿಸದಿದ್ದಲ್ಲಿ ಉಂಟಾಗುವ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಗಳಿಗೆ ಸೂಚನೆ: ಯಾವುದೇ ಖಾಸಗಿ ಅನುದಾನರಹಿತ ಶಾಲೆಗಳು ಬಾಕಿ ಇರುವ ಶುಲ್ಕ ಮರುಪಾವತಿಗಾಗಿ ಕೂಡಲೇ ಇಲಾಖೆಯ ತಂತ್ರಾಂಶದ ಮೂಲಕ ಬೇಡಿಕೆಯನ್ನು ಸಲ್ಲಿಸಲು ಕೋರಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular