ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದ ಮೇಲೆ ಕಿಡಿಗೇಡಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ನಕಲಿ ಖಾತೆ ತೆರೆದು ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಲಾಗಿದ್ದು, ಅನ್ವರ್ ಪಾಶ, ಶಾಹಿದ್, ಮಹಮ್ಮದ್ ಶರೀಫ್ ಎಂಬುವರ ಮೇಲೆ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಅಖಿಲ ಕರ್ನಾಟಕ ಯಡಿಯೂರಪ್ಪನವರ ಅಭಿಮಾನಿ ಬಳಗ ಎಂದು ಫೇಸ್ಬುಕ್ ನಲ್ಲಿ ಖಾತೆ ತೆರೆದು ಮೋದಿ, ಅಮಿತ್ ಶಾ ಅವರ ಫೋಟೋಗಳನ್ನು ತಿರುಚಿ ಅಶ್ಲೀಲ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದರು. ಕಬ್ಬನ್ ಪೇಟೆಯ ಸಿದ್ದು ಪುಂಡಿಕಲಾ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read