HomeKarnatakaಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ.

ವಕೀಲ ಚಾನ್ ಪಾಷ ಅವರನ್ನು ಪೊಲೀಸರು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದಾರೆ. ಬಳಿಕ ಅವರನ್ನು ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಿದ್ದಾರೆ. ಆಕ್ಷೇಪಾರ್ಹ ಪೋಸ್ಟ್ ಹಾಕಿದ ಬಗ್ಗೆ ಬಿಜೆಪಿ ಮುಖಂಡ ಪಿ. ಶಿವಾನಂದ ದೂರು ಸಲ್ಲಿಸಿದ್ದು, ಫೆಬ್ರವರಿ 3ರಂದು ಚಾನ್ ಪಾಷ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular