BIG NEWS: ಕಾರ್ಖಾನೆ ಕಾರ್ಮಿಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಕಾರ್ಖಾನೆಯ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಕಾರ್ಮಿಕರ ಕೆಸಲದ ಅವಧಿಯನ್ನು ಇಳಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿಯನ್ನು 12ಗಂಟೆಯಿಂದ 8 ಗಂಟೆಗೆ ಇಳಿಸಲು ತೀರ್ಮಾನಿಸಲಾಗಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಸಮಿತಿ, ಮಹಿಳಾ ಸಂಘಟನೆ ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿ ಸಿಎಂ ಸಿದ್ದ್ರಾಮಯ್ಯ ಅವರೊಂದಿಗೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕಾರ್ಮಿಕ ಮುಖಂಡರಿಗೆ ಕೆಲಸದ ಅವಧಿ ಕಡಿಮೆ ಮಾಡುವುದಾಗಿ ಭರವಸೆ ನೀಡಿದರು.

ರೈತರ ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಿಜೆಪಿ ಸರ್ಕಾರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಿಸಿತ್ತು. ಇದೀಗ 12 ಗಂಟೆಯಿದ ಮತ್ತೆ 8 ಗಂಟೆಗೆ ಇಳಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read