HomeLatest NewsSHOCKING : 'SSLC' ಪರೀಕ್ಷೆಯಲ್ಲಿ ಅನುತ್ತೀರ್ಣ : ಗದಗದಲ್ಲಿ ಮನನೊಂದು  ವಿದ್ಯಾರ್ಥಿ ಆತ್ಮಹತ್ಯೆ.!

SHOCKING : ‘SSLC’ ಪರೀಕ್ಷೆಯಲ್ಲಿ ಅನುತ್ತೀರ್ಣ : ಗದಗದಲ್ಲಿ ಮನನೊಂದು  ವಿದ್ಯಾರ್ಥಿ ಆತ್ಮಹತ್ಯೆ.!

ಗದಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.

ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಕನ್ನಡದಲ್ಲಿ 60, ಇಂಗ್ಲೀಷ್ ನಲ್ಲಿ 48 ಅಂಕ ಪಡೆದುಕೊಂಡಿದ್ದು, ಉಳಿದ ಎಲ್ಲಾ ವಿಷಯದಲ್ಲಿ ಫೇಲ್ ಆಗಿದ್ದನು. ಫಲಿತಾಂಶ ಬಂದ ದಿನದಿಂದ ಇದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದನು. ಇದೇ ವಿಷಯಕ್ಕೆ ಬಾಲಕ ನರೇಗಲ್ ಬಸ್ ನಿಲ್ದಾಣದ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್ ಉತ್ತಮ ಕಬಡ್ಡಿ ಆಟಗಾರನಾಗಿದ್ದು, ಸಹಪಾಠಿಗಳು ಕಂಬನಿ ಮಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular