HomeKarnatakaಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಯತ್ನ

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಯತ್ನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ವಂಚಕರು ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅನೇಕರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾರೆ. ಈ ಬಗ್ಗೆ ಅನುಮಾನಗೊಂಡ ಕೆಲವರು ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿದಾಗ ನಕಲಿ ಖಾತೆ ಎನ್ನುವುದು ಗೊತ್ತಾಗಿದೆ.

ಈ ನಕಲಿ ಖಾತೆಯಿಂದ ಯಾವುದೇ ಬರುವ ಯಾವುದೇ ಮನವಿಗಳನ್ನು ಸ್ವೀಕರಿಸದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular