BREAKING : ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸ್ಟಾರ್ ನಟರಿಗೆ ಅವಹೇಳನ : ಕಮಿಷನರ್ ಕಚೇರಿಗೆ ಆಗಮಿಸಿದ ನಿರ್ದೇಶಕ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ಓಪನ್ ಮಾಡಿರುವ ಕಿಡಿಗೇಡಿಗಳು ಸ್ಟಾರ್ ನಟರಿಗೆ ಅವಹೇಳನ ಮಾಡಿದ್ದಾರೆ. ಈ ಸಂಬಂಧ ಪೊಲೀಸ್ ಕಮಿಷನರ್ ಗೆ ದೂರು ದೂರು ನೀಡಲು ಮುಂದಾಗಿದ್ದಾರೆ.

ಹೌದು, ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಕೆಲವು ಸ್ಟಾರ್ ನಟರ ಬಗ್ಗೆ ಅವಹೇಳನವಾಗಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಎಸ್. ನಾರಾಯಣ್ ಅವರು ಇಂದು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಕಮಿಷನರ್ ಸೀಮಂತ್ ಕುಮಾರ್ ಗೆ ದೂರು ನೀಡಲು ಕಚೇರಿಗೆ ಆಗಮಿಸಿದ್ದಾರೆ.

ಎಸ್. ನಾರಾಯಣ್ ಅವರು ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು. ಚೈತ್ರದ ಪ್ರೇಮಾಂಜಲಿ (1992) ಚಿತ್ರದ ಮೂಲಕ ನಿರ್ದೇಶನ ಜೊತೆಗೆ ನಟನೆಗೂ ಪಾದಾರ್ಪಣೆ ಮಾಡಿದರು. ಈ ಚಿತ್ರವು ದೊಡ್ಡ ಯಶಸ್ಸನ್ನು ಕಂಡಿತು ಮತ್ತು ನಿರ್ದೇಶಕ ಮತ್ತು ನಟನಾಗಿ ಅವರ ಸಿನಿ ವೃತ್ತಿಜೀವನವನ್ನು ಪ್ರಾರಂಭಿಸಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read