ಬೆಂಗಳೂರು : ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ರಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ (Bomb Threat) ಬಂದಿದೆ ಎಂದು ತಿಳಿದು ಬಂದಿದೆ.
ಕಚೇರಿ ಆವರಣದಲ್ಲಿ ಆರ್ ಡಿ ಎಕ್ಸ್ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ.
ರಾಯಭಾರಿ ಕಚೇರಿಯ ಅಧಿಕಾರಿಗಳು ಇ ಮೇಲ್ ಪರಿಶೀಲನೆ ನಡೆಸುವಾಗ ಬಾಂಬ್ ಬೆದರಿಕೆ ಸಂದೇಶ ನೋಡಿದ್ದಾರೆ. ಕೂಡಲೇ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಸಮೇತ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಕುರಿತು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

