BREAKING : ಬ್ಲೂಟೂತ್ ಬಳಸಿ ‘KPSC’ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಪೊಲೀಸ್ ವಶಕ್ಕೆ

ಯಾದಗಿರಿ : ಬ್ಲೂಟೂತ್ ಬಳಸಿ ಕೆಪಿಎಸ್ಸಿ (KPSC) ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದನು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಈ ಸಂಬಂಧ ಈತನಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಯಾದಗಿರಿ ನಗರ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ರೂ, ಈತ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದಾನೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read