HomeLatest NewsBREAKING: ಅಸಲಿ ಅಭ್ಯರ್ಥಿಗಳ ಬದಲು ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ: ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ 7 ಅಭ್ಯರ್ಥಿಗಳ...

BREAKING: ಅಸಲಿ ಅಭ್ಯರ್ಥಿಗಳ ಬದಲು ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ: ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ 7 ಅಭ್ಯರ್ಥಿಗಳ ವಿರುದ್ಧ FIR ದಾಖಲು

ಬೆಂಗಳೂರು: ಅಸಲಿ ಅಭ್ಯರ್ಥಿಗಳ ಬದಲು ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದು ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

2018, 2022ರಲ್ಲಿ ಎಂಟಿಎಸ್ ಹುದ್ದೆಗೆ ನಡೆದಿದ್ದ ಪರೀಕ್ಷೆಯಲ್ಲಿ ಈ ರೀತಿ ಅಕ್ರಮಗಳು ನಡೆದಿದೆ. ಅರಣ್ಯ ಇಲಾಖೆ ಹಾಗೂ ಶಿಕ್ಷಣ ಮಂಡಳಿ ನಡೆಸಿದ್ದ ವುಡ್ ಸೈನ್ಸ್ ಟೆಕ್ನಾಲಜಿ ಅಭ್ಯರ್ಥಿಗಳಿಗೆ ನಡೆಸಿದ್ದ ಪರೀಕ್ಷೆಯಲ್ಲಿ ಅಸಲಿ ಅಭ್ಯರ್ಥಿಗಳ ಬದಲಾಗಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದು ಅಭ್ಯರ್ಥಿಗಳು ಸರ್ಕಾರಿ ಕೆಲಸವನ್ನೂ ಗಿಟ್ಟಿಸಿಕೊಂಡಿದ್ದಾರೆ. ಬೇರೊಬ್ಬರ ಕೈಯಲ್ಲಿ ಪರೀಕ್ಷೆ ಬರೆಸಿ ಅಸಲಿ ಅಭ್ಯರ್ಥಿಗಳು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳ ಸಹಿ ಹೊಂದಾಣಿಕೆಯಾಗದಿರುವಾಗ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅಭ್ಯರ್ಥಿಗಳ ಬಂಡವಾಳ ಬಯಲಾಗಿದೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆಯಲ್ಲಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿರುವ 7 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಭ್ಯರ್ಥಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular