BIG NEWS: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸುಳ್ಳು ಜಾತಿ ಪ್ರಮಾಣ ಪತ್ರ; ಸಿಕ್ಕಿಬಿದ್ದ ಮಾಜಿ ಶಾಸಕರ ಪತ್ನಿ

ಬೆಂಗಳೂರು: ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಾಯಕ ಉಪನ್ಯಾಸಕ ಹುದ್ದೆಗಾಗಿ ಶಾಸಕರ ಪತ್ನಿಯೊಬ್ಬರು ಸುಳ್ಳು ಪ್ರಮಾಣ ಪತ್ರ ನೀಡಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ.ಸುಜಾ ಕೆ.ಶ್ರೀಧರ್ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸಿಕ್ಕಿಬಿದ್ದವರು.

ಪರಿಶಿಷ್ಟಜಾತಿಯ ದ್ರಾವಿಡ ಜಾತಿಯ ಸುಳ್ಳು ಪ್ರಮಾಣಪತ್ರ ಪಡೆದು ಡಾ.ಸುಜಾ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆದುಕೊಂಡಿದ್ದರು. ಅದೇ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಜಿ.ಎನ್.ಶಕುಂತಲಾ ಅವರಿಗೆ ದೊರೆತಿದ್ದ ಬಡ್ತಿಗೆ ಮಾಜಿ ಶಾಸಕರು ತಮ್ಮ ಪ್ರಭಾವ ಬಳಸಿ ತನ್ನ ಪತ್ನಿ ಡಾ.ಸುಜಾ ಅವರಿಗೆ ಕೊಡಿಸಿದ್ದರು.

ಈ ಬಗ್ಗೆ ಡಾ.ಶಂಕುಂತಲಾ ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ ಹಾಗೂ ಸುಳ್ಳು ಪ್ರಮಾಣ ಪತ್ರ ನೀಡಿ ಬಡ್ತಿ ಪಡೆದಿದ್ದ ಡಾ.ಸುಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ನಾಗರಿಕಹಕ್ಕು ಜಾರಿನಿರ್ದೇಶನಲಾಯ ನೆಲಮಂಗಲ ತಹಶೀಲ್ದಾರ್, ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಶಿಫಾರಸು ಮಾಡಿದ್ದ ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗನ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read