ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ; ಆರೋಪಿ ವಿರುದ್ಧ FIR ದಾಖಲು

ಮಡಿಕೇರಿ: ಆಸ್ತಿ ಕಬಳಿಸಲು ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ ಆರೋಪಿ ವಿರುದ್ಧ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮಡಿಕೇರಿ ತಾಲೂಕಿನ ಹೆಚ್.ಎ.ಮುತ್ತಪ್ಪ ಎಂಬಾತನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರೋಪಿ ತಂದೆ-ತಾಯಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿದ್ದ. ಈ ಬಗ್ಗೆ ಚಂಗಪ್ಪ ಎಂಬುವವರು ತಹಶೀಲ್ದಾರ್ ಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪ್ರವೀಣ್ ಎಂಬುವವರು ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಮುತ್ತಪ್ಪ ವಿರುದ್ಧ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read