HomeKarnatakaಸಿಕ್ಕಿಬಿದ್ದ 1436 ನಕಲಿ ವೈದ್ಯರು: ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ: ‘ನಕಲಿ ಕ್ಲಿನಿಕ್’ ಫಲಕ...

ಸಿಕ್ಕಿಬಿದ್ದ 1436 ನಕಲಿ ವೈದ್ಯರು: ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ: ‘ನಕಲಿ ಕ್ಲಿನಿಕ್’ ಫಲಕ ಅಳವಡಿಕೆ

ಬೆಂಗಳೂರು: ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ 1436 ನಕಲಿ ವೈದ್ಯರು ಸಿಕ್ಕಿ ಬಿದ್ದಿದ್ದು, ಅಂತಹ ವೈದ್ಯರ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

ಅಲೋಪತಿ, ನ್ಯಾಚುರೋಪತಿ, ಆಯುರ್ವೇದ, ಹೋಮಿಯೋಪತಿ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದ ನಕಲಿ ವೈದ್ಯರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್ ನಲ್ಲಿ 423, ಕೋಲಾರ 179, ಬೆಳಗಾವಿ 170, ಕಲಬುರಗಿ 82, ಶಿವಮೊಗ್ಗ 74, ಧಾರವಾಡ 70, ಬೆಂಗಳೂರು 67 ಸೇರಿದಂತೆ ವಿವಿಧೆಡೆ ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಕಲಿ ವೈದ್ಯರನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದು, ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮೊಕದ್ದಮೆ ದಾಖಲಿಸಿದರೂ ನಕಲಿ ವೈದ್ಯರ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ನಕಲಿ ವೈದ್ಯರ ಕ್ಲಿನಿಕ್ ಗಳ ಎದುರು ದೊಡ್ಡದಾಗಿ ‘ನಕಲಿ’ ಎಂದು ಕಪ್ಪು ಬಣ್ಣದ ಫಲಕಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular