HomeKarnatakaನಕಲಿ ದಾಖಲೆ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳಿಗೇ ಶಾಕ್: ಸರ್ಕಾರದ ಇಲಾಖೆಗಳ 48 ಸೀಲ್,...

ನಕಲಿ ದಾಖಲೆ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳಿಗೇ ಶಾಕ್: ಸರ್ಕಾರದ ಇಲಾಖೆಗಳ 48 ಸೀಲ್, ಅಕ್ರಮ- ಸಕ್ರಮ ಹಕ್ಕು ಪತ್ರ ವಶಕ್ಕೆ

ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳ ನಕಲಿ ಮೊಹರು ತಯಾರಿಸಿಕೊಂಡು ದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ತಹಶೀಲ್ದಾರ್ ಹೆಚ್.ಜೆ. ರಶ್ಮಿ ಪತ್ತೆ ಮಾಡಿದ್ದಾರೆ.

ಅಧಿಕಾರಿಗಳ ತಂಡ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ವ್ಯಾಪ್ತಿಯ ಎಲ್. ಗುಡ್ಡೇಕೊಪ್ಪದ ರಾಜೇಂದ್ರ ಎಂಬುವರ ಮನೆ ಮೇಲೆ ಸೋಮವಾರ ದಾಳಿ ನಡೆಸಿದೆ. ಅಕ್ರಮ -ಸಕ್ರಮಕ್ಕೆ ಹಕ್ಕು ಪತ್ರ ಸೇರಿದಂತೆ ಅನೇಕ ನಕಲಿ ದಾಖಲೆಗಳನ್ನು ತಯಾರಿಸುತ್ತಿರುವ ಬಗ್ಗೆ ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ನೂರಾರು ನಕಲಿ ಹಕ್ಕು ಪತ್ರ ಹಾಗೂ ಹಕ್ಕು ಪತ್ರ ಮುದ್ರಿಸುವ ಕಾಗದ, ಸರ್ಕಾರದ ನಕಲಿ ದಾಖಲೆ ಸಿಕ್ಕಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಮನೆಯಿಂದ ವಶಪಡಿಸಿಕೊಂಡ ದಾಖಲೆಗಳಲ್ಲಿ ವಿವಿಧ ಬ್ಯಾಂಕುಗಳು, ಉಪ ನೋಂದಣಾಧಿಕಾರಿ ಕಚೇರಿ, ತಹಶೀಲ್ದಾರ್, ತಾಲೂಕು ಕಚೇರಿ, ವಲಯ ಅರಣ್ಯ ಅಧಿಕಾರಿ, ನ್ಯಾಯಾಲಯ ಹಾಗೂ ವಿವಿಧ ಗ್ರಾಮ ಪಂಚಾಯಿತಿ ಕಚೇರಿಗಳ ಹೆಸರಿನಲ್ಲಿರುವ 48 ನಕಲಿ ಸೀಲ್ ಪತ್ತೆಯಾಗಿವೆ. ಈ ಹಿಂದೆ ಹೊಸನಗರದಲ್ಲಿ ಕಾರ್ಯನಿರ್ವಹಿಸಿದ್ದ ಇಬ್ಬರು ತಹಶೀಲ್ದಾರ್ ಗಳ ಮಾದರಿ ಸಹಿ ಪತ್ತೆಯಾಗಿದೆ. ಅಲ್ಲದೆ, ನೈಜತಾ ಪ್ರಮಾಣ ಪತ್ರದ ನಕಲಿ ದಾಖಲೆಯೂ ಕಂಡುಬಂದಿವೆ. ಆರೋಪಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರಿಂದ ಪ್ರತಿ ಹಕ್ಕುಪತ್ರಕ್ಕೆ 25000 ರೂ. ಪಡೆಯುತ್ತಿದ್ದ ಎಂದು ಹೇಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ. ದಾಳಿಯಲ್ಲಿ ಪಿಎಸ್ಐ ಶಂಕರ್ ಗೌಡ ಪಾಟೀಲ್, ಕಂದಾಯ ಇಲಾಖೆ ಶಿರಸ್ತೇದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಆಂಜನೇಯ, ಗ್ರಾಮ ಲೆಕ್ಕಾಧಿಕಾರಿ ರೇಣುಕಯ್ಯ, ಚಿರಾಗ್, ನಾಗಪ್ಪ, ಅಮ್ಜದ್ ಖಾನ್, ಶಿವಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular