HomeLatest Newsವಿದೇಶದಲ್ಲಿ ನನ್ನ ಆಸ್ತಿ, ಹಣ ಇದ್ದರೆ ಸರ್ಕಾರಕ್ಕೆ ಬರೆದುಕೊಡುತ್ತೇನೆ, ನನ್ನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿ:...

ವಿದೇಶದಲ್ಲಿ ನನ್ನ ಆಸ್ತಿ, ಹಣ ಇದ್ದರೆ ಸರ್ಕಾರಕ್ಕೆ ಬರೆದುಕೊಡುತ್ತೇನೆ, ನನ್ನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸ್ಪೋಟಕ ಹೇಳಿಕೆ

ಚಿಕ್ಕಬಳ್ಳಾಪುರ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಜುಲೈ 14ರಂದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ವ್ಯವಹಾರ ಇದೆ ಎಂದು ಒಪ್ಪಿಕೊಳ್ಳುವಂತೆ ಇಡಿ ಅಧಿಕಾರಿಗಳು ನನಗೆ ಒತ್ತಾಯಿಸಿದರು. ಆದರೆ, ನಾನು ಒಪ್ಪಿಕೊಂಡಿಲ್ಲ. ನನ್ನ ಹೆಸರಿನಲ್ಲಿ ವಿದೇಶದಲ್ಲಿ ಏನಾದ್ರೂ ಆಸ್ತಿ ಅಥವಾ ಹಣ ಇದ್ದರೆ ಸರ್ಕಾರಕ್ಕೆ ಬರೆದು ಕೊಡುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ರಂಗಸ್ವಾಮಿ ಮತ್ತು ವೀರಸ್ವಾಮಿ ಎಂಬವರಿಂದ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನನ್ನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಈ ಕುರಿತಾಗಿ ಹಿಂದೆಯೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular