HomeKarnatakaBIG NEWS: ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಆರೋಪಿ ಅರೆಸ್ಟ್

BIG NEWS: ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ನಕಲಿ ದಾಖಲಾತಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ವಿದೇಶಿಯರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಡುತ್ತಿದ್ದ ಕಂಪ್ಯೂಟರ್ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದ ಕೃಷ್ಣಮೂರ್ತಿ ಎಂಬ ಆರೋಪಿಯನ್ನು ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈತ ವಿದೇಶಿಗರಿಗೆ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ ಪೋರ್ಟ್ ತಯಾರು ಮಾಡಿ ಕೊಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ಬಾಹಿರಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular