HomeKarnatakaಹನೂರು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ಘೋಷಣೆ

ಹನೂರು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ಘೋಷಣೆ

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡೇಟಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಹನೂರು ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದ್ದಾರೆ. ನಂತರ ಕುಟುಂಬದವರು ಪ್ರತಿಭಟನೆ ಹಿಂಪಡೆದುಕೊಂಡಿದ್ದಾರೆ.

ಹನೂರು ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿನಿಂದ ಮೃತಪಟ್ಟಿರುವ ಮೂವರ ಕುಟುಂಬಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ  ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸಿದ ಶಾಸಕರು ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ನಕಲಿ ಎನ್‌ ಕೌಂಟ‌ರ್ ನಡೆಸಿ ಮೂವರನ್ನು ಕೊಂದು ಹಾಕಿದ್ದಾರೆ. ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ನೇತೃತ್ವದಲ್ಲಿ ನಿಷ್ಪಪ್ಪಪಾತ ತನಿಖೆ ನಡೆಯಬೇಕು, ತಪ್ಪಿತಸ್ಥ ಸಿಬ್ಬಂದಿಗೆ ಕಠಿಣ ಶಿಕ್ಷೆಯಾಗಬೇಕು, ಮೃತರ ಕುಟುಂಬಗಳಿಗೆ ನ್ಯಾಯಯುತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಹಾರದ ಘೋಷಣೆ:

ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಮಂಜುನಾಥ್, ರಾಜ್ಯ ಸರ್ಕಾರದಿಂದ ತಾತ್ಕಾಲಿಕವಾಗಿ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಲಾಗಿದೆ. ಜೊತೆಗೆ ನನ್ನ ವೈಯಕ್ತಿಕ ವತಿಯಿಂದ ತಲಾ 10 ಲಕ್ಷ ರೂ. ಪರಿಹಾರ ನೀಡುತ್ತೇನೆ. ಹೀಗೆ ಒಟ್ಟು ತಲಾ 15 ಲಕ್ಷ ರೂ.ಪರಿಹಾರ ಮೃತ ಕುಟುಂಬಕ್ಕೆ ಸಿಗಲಿದೆ ಎಂದು ತಿಳಿಸಿದ್ದಾರೆ.

ಗುಂಡು ಹಾರಿಸಿದ ಪ್ರಕರಣ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನಿಖಾ ತಂಡವನ್ನೂ ರಚಿಸಲಾಗಿದ್ದು, ವರದಿ ಸಲ್ಲಿಕೆಯಾದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದರು.

ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಶಾಸಕರು, ಕುಟುಂಬಗಳಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular