HomeKarnatakaಜಿಲ್ಲಾಧಿಕಾರಿ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿ; ಶಾಕ್ ಆದ ಡಿಸಿ

ಜಿಲ್ಲಾಧಿಕಾರಿ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿ; ಶಾಕ್ ಆದ ಡಿಸಿ

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗುತ್ತಿದೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುವುದು, ಬ್ಲ್ಯಾಕ್ ಮೇಲ್ ಮಡುವುದು ಹೀಗೆ ಹಲವು ರೀತಿಯ ವಂಚನೆಗಳು ನಡೆಯುತ್ತಿವೆ. ಈ ಮಧ್ಯೆ ಜಿಲ್ಲಾಧಿಕಾರಿಯೊಬ್ಬರ ನಕಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ಇದನ್ನು ನೋಡಿದ ಜಿಲ್ಲಾಧಿಕರಿಯೇ ಶಾಕ್ ಆಗಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರ ಹೆಸರಲ್ಲಿ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ನಕಲಿ ಅಕೌಂಟ್ ತೆಗೆದಿದ್ದು, ಜಿಲ್ಲಾಧಿಕಾರಿಗಳ ಭಾವಚಿತ್ರವಿರುವ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಗಮನಿಸಿದ ಜಿಲ್ಲಾಧಿಕಾರಿ, ತನ್ನ ಹೆಸರಲ್ಲಿ ಯಾರೋ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿದ್ದಾರೆ. ನಕಲಿ ಫೇಸ್ ಬುಕ್ ಸಂದೇಶವನ್ನು ಯಾರೂ ನಂಬಬೇಡಿ. ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular