HomeKarnatakaBIG NEWS: ಲೋಕಾಯುಕ್ತ DYSP ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಆರೋಪಿ ಅರೆಸ್ಟ್

BIG NEWS: ಲೋಕಾಯುಕ್ತ DYSP ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್: ಆರೋಪಿ ಅರೆಸ್ಟ್

ಬೆಂಗಳೂರು: ಲೋಕಯುಕ್ತ ಡಿವೈಎಸ್ ಪಿ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮುರುಗಪ್ಪ ಬಂಧಿತ ಆರೋಪಿ. ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಕೆಲಸದಿಂದ ವಜಾಗೊಂಡಿದ್ದ ಮುರುಗಪ್ಪ ಲೋಕಾಯುಕ್ತ ಡಿವೈ ಎಸ್ ಪಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ಕರೆ ಮಾಡಿ ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಇದೆ. ಪ್ರಕರಣ ಮುಚ್ಚಿ ಹಾಕಬೇಕು ಎಂದರೆ ಹಣ ಕೊಡಬೇಕು ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದ.

ಲೋಕಾಯುಕ್ತ ಡಿವೈ ಎಸ್ ಪಿ ಬಸವರಾಜು ಆರ್.ಮುರುಗನ್ ನೀಡಿದ ದೂಈರಿನ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮುರುಗಪ್ಪನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular