ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ವಿವಿಧ ಜಿಲ್ಲೆಗಳ 8 ಮಂದಿ ಶಿಕ್ಷೆಗೆ ಒಳಗಾಗಿದ್ದಾರೆ. ಕೋಲಾರ ತಾಲೂಕಿನ ಸುನಿಲ್ ಕುಮಾರ್, ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸಂತೋಷ್ ಕುಮಾರ್, ಹಾಸನ ತಾಲೂಕಿನ ಎ.ಪಿ. ಶಂಕರ್, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಷಣ್ಮುಗ, ನಾರಾಯಣಸ್ವಾಮಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿ.ಎನ್. ಶ್ರೀರಾಮ್, ದೊಡ್ಡಬಳ್ಳಾಪುರ ತಾಲೂಕಿನ ಮುನಿರಾಜು, ಹೊಸಕೋಟೆ ತಾಲೂಕಿನ ಎನ್‌.ಬಿ. ಸಿದ್ದಲಿಂಗಯ್ಯ ಶಿಕ್ಷೆಗೆ ಒಳಗಾಗಿದ್ದಾರೆ.

ಚಾಮರಾಜನಗರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದ 46 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ 2012 ರ ಆಗಸ್ಟ್ ನಲ್ಲಿ ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ದ್ವಿತೀಯ ಪಿಯುಸಿ ವಿದ್ಯಾರ್ಹತೆಗಾಗಿ ಅಭ್ಯರ್ಥಿಗಳ ಅಂಕಪಟ್ಟಿ ಪರಿಶೀಲಿಸಿ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಇವರೆಲ್ಲರೂ ಸೇರಿದಂತೆ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದಾಗ ಈ 8 ಅಭ್ಯರ್ಥಿಗಳ ಅಂಕಪಟ್ಟಿ ನಕಲಿ ಎಂದು ಗೊತ್ತಾಗಿದ್ದು, ನೇಮಕಾತಿ ಪ್ರಾಧಿಕಾರಕ್ಕೆ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದು ವಂಚಿಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಇವರ ವಿರುದ್ಧ ಚಾಮರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 8 ಮಂದಿಯನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read