HomeKarnatakaBREAKING: ನಕಲಿ ಔಷಧ ತಯಾರಿಕಾ ಜಾಲ ಪತ್ತೆ: ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಔಷಧ...

BREAKING: ನಕಲಿ ಔಷಧ ತಯಾರಿಕಾ ಜಾಲ ಪತ್ತೆ: ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಔಷಧ ವಶಕ್ಕೆ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿಯಲ್ಲಿ ನಕಲಿ ಔಷಧ ತಯಾರಿಕಾ ಜಾಲ ಪತ್ತೆಯಾಗಿದೆ. ಪ್ರತಿಷ್ಠಿತ ಕಂಪನಿ ಲೇಬಲ್ ಬಳಸಿ ನಕಲಿ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಅಂದಾಜು 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಔಷಧ ವಶಕ್ಕೆ ಪಡೆಯಲಾಗಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದಿಂದ ದಾಳಿ ನಡೆಸಲಾಗಿದೆ. ಆಯುಕ್ತ ಶ್ರೀನಿವಾಸ ನೇತೃತ್ವದ ತಂಡದಿಂದ ದಾಳಿ ನಡೆದಿದೆ.

ಬಿಡದಿಯ ಹೆಜ್ಜಾಲದಲ್ಲಿ 5 ಕೋಟಿ ರೂಪಾಯಿ ಮೌಲ್ಯದ ನಕಲಿ ಔಷಧ ಪತ್ತೆಯಾಗಿದೆ. ಈ ನಕಲಿ ಔಷಧಗಳನ್ನೇ ಮಾರುಕಟ್ಟೆಗೆ ಪೂರೈಕೆ ಮಾಡಿದ್ದರು ಎನ್ನಲಾಗಿದೆ. ಬಿಡದಿ ಬಳಿ ನಕಲಿ ಔಷಧ ತಯಾರಿಕಾ ಜಾಲ ಪತ್ತೆಯಾಗಿದ್ದು, ಪ್ರತಿಷ್ಠಿತ ಕಂಪನಿಯ ಲೇಬಲ್ ಬಳಸಿ ನಕಲಿ ಔಷಧ ಮಾರಾಟ ಮಾಡುತ್ತಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದಿಂದ ದಾಳಿ ನಡೆದಿದ್ದು, ಕ್ರಮ ಜರುಗಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular